Sunday, September 8, 2024
Homeಸುದ್ದಿಶಿರೂರು ಗುಡ್ಡ ಕುಸಿತ: ಸರ್ಕಾರದ ನಡೆ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಲಾರಿ ಚಾಲಕ ಅರ್ಜುನನ ಕುಟುಂಬ

ಶಿರೂರು ಗುಡ್ಡ ಕುಸಿತ: ಸರ್ಕಾರದ ನಡೆ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಲಾರಿ ಚಾಲಕ ಅರ್ಜುನನ ಕುಟುಂಬ

ಕಾರವಾರ, ಜುಲೈ 23: ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತ ಸಂಭವಿಸಿ ಒಂದು ವಾರ ಕಳೆದಿದೆ. ರಾಷ್ಟ್ರೀಯ ಹೆದ್ದಾರಿ ಮೇಲೆ ಬಿದ್ದಿರುವ ಸಾವಿರಾರು ಟನ್ ಮಣ್ಣು ತೆರವು ಕಾರ್ಯ 70% ಮುಕ್ತಾಯವಾಗಿದೆ. ಮೃತರಾದ ಹನ್ನೊಂದು ಜನರ ಪೈಕಿ 8 ಜನರ ಮೃತದೇಹ ಪತ್ತೆ ಆಗಿದ್ದು 4 ಜನರ ಶವ ಪತ್ತೆಯಾಗಬೇಕಿದೆ. ಈ ಮಧ್ಯೆ ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ಕುಟುಂಬಸ್ಥರಿಂದ ಸರ್ಕಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದು ಅರ್ಜಿ ಸಲ್ಲಿಸಲಾಗಿದೆ.

ಘಟನಾ ಸ್ಥಳದಲ್ಲಿ ಲಾರಿಯ ಜಿಪಿಆರ್ಎಸ್ ಲಾಸ್ಟ್ ಲೊಕೇಶನ್ ಪತ್ತೆ ಹಿನ್ನೆಲೆ ಕಾರ್ಯಾಚರಣೆ ಅವೈಜ್ಞಾನಿಕವಾಗಿ, ವಿಳಂಬವಾಗಿ ನಡೀತಿದೆ ಎಂದು ಲಾರಿ ಚಾಲಕ ಅರ್ಜುನ್ ಕುಟುಂಬಸ್ಥರಿಂದ ಆರೋಪಿಸಲಾಗಿದೆ. ಹಾಗಾಗಿ ರಾಜ್ಯ ಸರ್ಕಾರದಿಂದ ಹೈಕೋರ್ಟ್ ವರದಿ ಕೇಳಿದ್ದು, ನಾಳೆ ಈ ಪ್ರಕರಣ ಸಂಬಂಧ ವಿಚಾರಣೆ ನಡೆಯಲಿದೆ.

ಮಣ್ಣಿನ ಕುಸಿತದಿಂದ ನದಿಯಲ್ಲಿ ತೇಲಿಹೋದ ಗಂಗೆಕೊಳ್ಳದ ಲೋಕೇಶ್ ನಾಯ್ಕ, ಶಿರೂರಿನ ಜಗನ್ನಾಥ ಜಟ್ಟಿ, ಉಳವರೆ ಗ್ರಾಮದ ಸಣ್ಣಿ ಹನುಮಂತಗೌಡ, ಕೇರಳ ಮೂಲದ ಅರ್ಜುನ್ ಶವ ಪತ್ತೆಯಾಗಬೇಕಿದೆ. ಶಂಕಿತ ಸ್ಥಳದಲ್ಲಿ ರಾಡಾರ್ ಮೂಲಕ ಶೋಧ ಕಾರ್ಯ ಮಾಡಿದರೂ ಟ್ರಕ್, ಟ್ಯಾಂಕರ್ಗಳು ಇರುವುದು ಪತ್ತೆಯಾಗಿಲ್ಲ.

ಈ ಕಾರಣದಿಂದ ರಸ್ತೆಯ ಬದಿ ಇದ್ದ ಅಂಗಡಿ ನೆಲಸಮವಾದ ಕಡೆ ಶೋಧ ಕಾರ್ಯ ನಡೆಸುತಿದ್ದು ಗಂಗಾವಳಿ ನದಿಗೆ ಬಿದ್ದ ಮಣ್ಣಿನ ಗುಡ್ಡದಲ್ಲಿ ಎನ್ಡಿಆರ್ಎಫ್, ಎಸ್ಡಿಆರ್ಎಫ್ ಹಾಗೂ ಆರ್ಮಿ ಕಮಾಂಡೋಗಳ ತಂಡ ಶೋಧ ಕಾರ್ಯ ಮುಂದುವರೆಸಿದೆ.

ಜಿಲ್ಲಾಡಳಿತದ ವಿರುದ್ಧ ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುಡ್ಡಕುಸಿತದಲ್ಲಿ ಮೃತಪಟ್ಟ ಶಾಂತಿ ಲಕ್ಷಣ ನಾಯ್ಕ ಮನೆಗೆ ಭೇಟಿ ನೀಡಿ ವೇಳೆ ಮಾತನಾಡಿದ ಅವರು, ಕಣ್ಮರೆಯಾದವರ ಶೋಧಕಾರ್ಯದಲ್ಲಿ ಜಿಲ್ಲಾಡಳಿತದ ನಿರ್ಲಕ್ಷ್ಯ ಆರೋಪ ಮಾಡಿದ್ದಾರೆ.

ದುರಂತದಲ್ಲಿ ಕಣ್ಮರೆಯಾದವರ ಪೈಕಿ 6 ಮಂದಿ ನಾಮಧಾರಿ ಸಮುದಾಯದವರು. ಜಗನ್ನಾಥ ಹಾಗೂ ಲೋಕೇಶ್‌ನನ್ನ ಪತ್ತೆಮಾಡಲು ಇನ್ನೂ ಸಾಧ್ಯವಾಗಿಲ್ಲ. ನಾಮಧಾರಿ ಸಮುದಾಯದವರೆಂದೇ ಸರ್ಕಾರ ಕಡೆಗಣಿಸುತ್ತಿದೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News