ಉಡುಪಿ – ಕಬ್ಬಿಣದ ರಾಡ್ ಗಳ ಜೊತೆ ಅಪಾರ್ಟ್ ಮೆಂಟ್ ಗೆ ನುಗ್ಗಲು ವಿಫಲ ಯತ್ನ

ಉಡುಪಿ: ಮುಸುಕು ಹಾಕಿಕೊಂಡು ಬಂದಿರುವ ನಾಲ್ವರು ಅಪಾರ್ಟ್ ಮೆಂಟ್ ಒಂದಕ್ಕೆ ನುಗ್ಗಲು ಯತ್ನಿಸಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ.

ಉಡುಪಿಯ ಬ್ರಹ್ಮಗಿರಿಯಲ್ಲಿ ಗುರುವಾರ ಮುಂಜಾನೆ ಈ ಘಟನೆ ನಡೆದಿದ್ದು, ಇದು ಅಪಾರ್ಟ್ ಮೆಂಟ್ ನ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ.

ನಾಲ್ವರು ಮುಸುಕುಧಾರಿಗಳು ರಾಡ್ ಗಳನ್ನು ಹಿಡಿದು ಶಸ್ತ್ರಸಜ್ಜಿತವಾಗಿ ಅಪಾರ್ಟ್ ಮೆಂಟ್ ಗೆ ನುಗ್ಗಲು ಯತ್ನಿಸಿದ್ದಾರೆ. ನಾಲ್ವರು ಕೂಡಾ ತಮ್ಮ ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡು ಫ್ಲ್ಯಾಟ್ ಒಳಗೆ ನುಗ್ಗಲು ಯತ್ನಿಸಿರುವುದು, ಅಪಾರ್ಟ್ ಮೆಂಟ್ಗೆ ಪ್ರವೇಶಿಸಲು ವಿಫಲರಾಗಿ ಸ್ಥಳದಿಂದ ಹಿಂದಿರುಗಿರುವುದು ಸಿಸಿಟಿವಿ ದೃಶ್ಯದಲ್ಲಿ ಕಂಡುಬಂದಿದೆ.

ಮುಸುಕುಧಾರಿಗಳು ಒಳನುಗ್ಗಲು ಯತ್ನಿಸಿದ ಫ್ಲ್ಯಾಟ್ ನಲ್ಲಿ ವಯಸ್ಸಾದ ದಂಪತಿ ವಾಸಿಸುತ್ತಿದ್ದರು. ಈ ದಂಪತಿ ಒಂದು ವಾರದ ಹಿಂದೆ ಮುಂಬೈಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಈ ನಾಲ್ವರು ಮುಸುಕುಧಾರಿಗಳು ಒಂದೇ ಬಡಾವಣೆಯ ಒಟ್ಟು ಮೂರು ಅಪಾರ್ಟ್ ಮೆಂಟ್ ಕಟ್ಟಡಗಳಲ್ಲಿ ದರೋಡೆಗೆ ಯತ್ನಿಸಿದ್ದರು ಎನ್ನಲಾಗಿದೆ. ಘಟನೆಯ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.

Baravanige News

Translate »

You cannot copy content from Baravanige News

Scroll to Top