ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ದೋಸ್ತಿಗಳ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದ ದೋಸ್ತಿಗಳು ಮೈಸೂರು ಚಲೋ ಆರಂಭಿಸಿದ್ದಾರೆ.

ಬೆಂಗಳೂರಿನ ಕೆಂಗೇರಿ ಬಳಿ ಕೆಂಪಮ್ಮ ದೇವಸ್ಥಾನದ ಬಳಿ ನಗಾರಿ ಬಾರಿಸುವ ಮೂಲಕ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಮತ್ತು ಮಾಜಿ ಸಿಎಂ, ಕೇಂದ್ರ ಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅವರು ಪಾದಯಾತ್ರೆಗೆ ಚಾಲನೆ ನೀಡಿದರು.

ಇಂದಿನಿಂದ ಆಗಸ್ಟ್ 10 ರವರೆಗೆ ಏಳು ದಿನಗಳ ಕಾಲ ಒಟ್ಟು 124 ಕಿಮೀವರೆಗೆ ಪಾದಯಾತ್ರೆ ನಡೆದು ಮುಡಾ ಕಚೇರಿಯಲ್ಲಿ ಕೊನೆಯಾಗಲಿದೆ. ಕೊನೆಯ ದಿನದಂದು ಮೈಸೂರಿನಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಥವಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವು ನಾಯಕರು ಭಾಗಿಯಾಗುವ ಸಾಧ್ಯತೆಯಿದೆ.

ಮೈತ್ರಿ ಪಾದಯಾತ್ರೆಯ ಹಾದಿ
* ಆ.3 – ಕೆಂಗೇರಿಯಲ್ಲಿ ಆರಂಭ. ಬಿಡದಿಯಲ್ಲಿ ವಾಸ್ತವ್ಯ
* ಆ.4 – ಬಿಡದಿಯಲ್ಲಿ ಆರಂಭ. ಕೆಂಗಲ್‌ನಲ್ಲಿ ವಾಸ್ತವ್ಯ
* ಆ.5 – ಕೆಂಗಲ್‌ನಲ್ಲಿ ಆರಂಭ. ನಿಡಘಟ್ಟದಲ್ಲಿ ವಾಸ್ತವ್ಯ
* ಆ.6 – ನಿಡಘಟ್ಟದಲ್ಲಿ ಆರಂಭ. ಮಂಡ್ಯದಲ್ಲಿ ವಾಸ್ತವ್ಯ
* ಆ.7 – ಮಂಡ್ಯದಲ್ಲಿ ಆರಂಭ. ತೂಬಿನಕೆರೆಯಲ್ಲಿ ವಾಸ್ತವ್ಯ
* ಆ.8 – ತೂಬಿನಕೆರೆಯಲ್ಲಿ ಆರಂಭ. ಶ್ರೀರಂಗಪಟ್ಟಣದಲ್ಲಿ ವಾಸ್ತವ್ಯ
* ಆ.9 – ಶ್ರೀರಂಗಪಟ್ಟಣದಲ್ಲಿ ಆರಂಭ. ಮೈಸೂರು ಹೊರವಲಯದಲ್ಲಿ ವಾಸ್ತವ್ಯ
* ಆ.10 – ಮೈಸೂರು ಹೊರವಲಯದಲ್ಲಿ ಆರಂಭ. ವೇದಿಕೆಯಲ್ಲಿ ಅಂತ್ಯ

Baravanige News

Translate »

You cannot copy content from Baravanige News

Scroll to Top