ಉಡುಪಿ: 29 ವರ್ಷಗಳಿಂದ ತಲೆಮೆರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಉಡುಪಿ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 29 ವರ್ಷಗಳಿಂದ ತಲೆಮೆರೆಸಿಕೊಂಡಿದ್ದ ಆರೋಪಿಯೊರ್ವನನ್ನು ಮಣಿಪಾಲ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬಂಧಿತನನ್ನು ಕುಂದಾಪುರದ ಕೃಷ್ಣ ಭಂಡಾರಿ ಎಂದು ಗುರುತಿಸಲಾಗಿದೆ.

1995ರಲ್ಲಿ ವ್ಯಕ್ತಿಯೊಬ್ಬರಿಗೆ ಅಡ್ಡಗಟ್ಟಿ, ಕಬ್ಬಿಣದ ಸರಳುಗಳಿಂದ ತೀವ್ರವಾಗಿ ಹಲ್ಲೆ ನಡೆಸಲಾಗಿತ್ತು. ಈ ಹಲ್ಲೆ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿದ್ದ ಕೃಷ್ಣ ಭಂಡಾರಿ ತಲೆಮರಿಸಿಕೊಂಡಿದ್ದ. ಇದೀಗ ಆತನನ್ನು ಪೊಲೀಸ್ ನಿರೀಕ್ಷಕ ದೇವರಾಜ್ ಟಿ.ವಿ. ಮಾರ್ಗದರ್ಶನದಲ್ಲಿ ಸಿಬ್ಬಂದಿ ಪ್ರಸನ್ನ ಸಿ. ಹಾಗೂ ಇಮ್ರಾನ್ ಮಾಹಿತಿಯನ್ನು ಕಲೆಹಾಕಿ ಕುಂದಾಪುರದಿಂದ ವಶಕ್ಕೆ ಪಡೆದುಕೊಂಡಿದ್ದಾರೆ. ಹಾಗೂ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

You cannot copy content from Baravanige News

Scroll to Top