ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಕಪಾಳಮೋಕ್ಷ ಮಾಡಿದ ಸಚಿವ ವಿ.ಸೋಮಣ್ಣ

ಚಾಮರಾಜನಗರ, ಅ 23: ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ರಾಜ್ಯ ವಸತಿ, ಮೂಲಸೌಕರ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಘಟನೆಯೊಂದು ಗುಂಡ್ಲುಪೇಟೆ ತಾಲೂಕಿನ ಹಂಗಳದಲ್ಲಿ ಅಕ್ಟೋಬರ್ 22ರ ಶನಿವಾರ ಸಂಜೆ ನಡೆದಿದೆ.

ಮಹಿಳೆಗೆ ಸಚಿವರು ಕಪಾಳಮೋಕ್ಷ ಮಾಡಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಂಗಳ ಗ್ರಾಮ ಪಂಚಾಯಿತಿ ವತಿಯಿಂದ 173 ನಿವೇಶನ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವ ವೇಳೆ ಈ ಘಟನೆ ನಡೆದಿದೆ. ಫಲಾನುಭವಿಗಳ ಆಯ್ಕೆಯಲ್ಲಿ ತಾರತಮ್ಯವಾಗಿದೆ ಎಂದು ಆರೋಪಿಸಿ ಕೆಲ ಮಹಿಳೆಯರು ಸಚಿವರಿಗೆ ಘೇರಾವ್ ಹಾಕಲು ಯತ್ನಿಸಿದ್ದು, ಈಗಾಗಲೇ ಸರಕಾರಿ ಜಮೀನು ಹೊಂದಿರುವವರಿಗೆ ನಿವೇಶನ ಮಂಜೂರು ಮಾಡಿ ಅನ್ಯಾಯ ಮಾಡಲಾಗಿದೆ ಎಂದರು. ಕಾರ್ಯಕ್ರಮದ ವೇಳೆ ಕೆಂಪಮ್ಮ ಎಂಬ ಮಹಿಳೆಯೊಬ್ಬರು ತಮ್ಮ ಸಂಕಷ್ಟವನ್ನು ಸಚಿವರ ಬಳಿ ಹೇಳಿಕೊಂಡಿದ್ದು, ಸಿಟ್ಟಿಗೆದ್ದ ಸಚಿವರು ಕಪಾಳಮೋಕ್ಷ ಮಾಡಿದ್ದಾರೆ.

You cannot copy content from Baravanige News

Scroll to Top