ಮುಂಬೈ : ಯುಪಿಐ ಮೂಲಕ ಇನ್ನು ಮುಂದೆ 5 ಲಕ್ಷ ರೂ.ವರೆಗೆ ಹಣವನ್ನು ವರ್ಗಾವಣೆ ಮಾಡಬಹುದು.
ಇಲ್ಲಿಯವರೆಗೆ ಒಂದು ಬಾರಿಗೆ ಗರಿಷ್ಟ 1 ಲಕ್ಷ ರೂ.ವರೆಗೆ ಹಣವನ್ನು ಯುಪಿಐ ಮೂಲಕ ವರ್ಗಾವಣೆ ಮಾಡಲು ಅವಕಾಶವಿತ್ತು. ಈಗ ಈ ಮಿತಿಯನ್ನು 5 ಲಕ್ಷ ರೂ. ವರೆಗೆ ಏರಿಕೆ ಮಾಡಲಾಗಿದೆ.
ಭಾರತೀಯ ರಿಸರ್ವ್ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿಯ ಸಭೆಯ ಬಳಿಕ ಗವರ್ನರ್ ಶಕ್ತಿಕಾಂತ್ ದಾಸ್ ಅವರು ಯುಪಿಐ ಮೂಲಕ 5 ಲಕ್ಷ ರೂ. ವರೆಗೆ ಹಣವನ್ನು ವರ್ಗಾವಣೆ ಮಾಡಬಹುದು ಎಂದು ತಿಳಿಸಿದರು.
ಇನ್ನು ಮುಂದೆ ಯುಪಿಐ ಮೂಲಕ 5 ಲಕ್ಷ ರೂ ವರ್ಗಾವಣೆ ಮಾಡ್ಬಹುದು!
