ಕಾಪು : ಜಾಮೀನು ಪಡೆದು ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಕಾಪು : ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ನಾಗನ ಗೌಡ ( 49) ಎಂಬಾತನನ್ನು ಕಾಪು ಪೊಲೀಸರು ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಪೇಟೆಯಲ್ಲಿ ಬಂಧಿಸಿ ಕರೆ ತಂದಿದ್ದಾರೆ.

ಆರೋಪಿ ವಿರುದ್ಧ ಕಾಪು ಪೊಲೀಸ್‌ ಠಾಣೆ ಮತ್ತು ಶಿವಮೊಗ್ಗ ಮಹಿಳಾ ಠಾಣೆಯಲ್ಲಿ ಮಹಿಳೆಯರಿಗೆ ಕಿರುಕುಳ ಪ್ರಕರಣ ದಾಖಲಾಗಿತ್ತು. ಆರೋಪಿಯು ಈ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದ.

ಕಾಪು ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವು ಉಡುಪಿ ಎರಡನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲ ಯದಲ್ಲಿ ವಿಚಾರಣೆಯಲ್ಲಿದ್ದು, 2022ರ ಆ. 24ರಿಂದ ನ್ಯಾಯಾ ಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆರೋಪಿ ವಿರುದ್ದ ನ್ಯಾಯಾಲಯವು 9 ಸಲ ಜಾಮೀನು ರಹಿತ ಬಂಧನ ವಾರಂಟ್‌ ಹೊರಡಿಸಿತ್ತು.

ಕಾಪು ಠಾಣೆಯ ಎಸ್ಸೆ„ ಅಬ್ದುಲ್‌ ಖಾದರ್‌ ಮಾರ್ಗದರ್ಶನದಲ್ಲಿ ಸಿಬಂದಿ ಸುರೇಶ ಮತ್ತು ಅಖೀಲ್‌ ಆ. 6ರಂದು ಆರೋಪಿಯನ್ನು ಬಂಧಿಸಿದ್ದಾರೆ.

You cannot copy content from Baravanige News

Scroll to Top