ಕಾಪು ವೃತ್ತದ ಕ್ರೀಡಾಕೂಟದಲ್ಲಿ ಶಿರ್ವದ ಡಾನ್ ಬಾಸ್ಕೋ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಗೆ ಸಮಗ್ರ ಚಾಂಪಿಯನ್ ಪ್ರಶಸ್ತಿ.

ಕುತ್ಯಾರು ಸೂರ್ಯ ಚೈತನ್ಯ ಹೈಸ್ಕೂಲ್ ನಲ್ಲಿ ಜರಗಿದ ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ದಂಡತೀರ್ಥ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಉಳಿಯಾರಗೋಳಿಯ ಮಹಮ್ಮದ್ ಅಯಾನ್ ಮತ್ತು ಚಿರಾಗ್ ಬಾಲಕರ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ , ಶಿರ್ವದ ಡಾನ್ ಬಾಸ್ಕೋ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ನಿಶಾ ಮತ್ತು ಅನುಷಾ ಬಾಲಕಿಯರ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಗಳಿಸಿದರು.

ಬಾಲಕರ ವಿಭಾಗದ ಸಮಗ್ರ ಚಾಂಪಿಯನ್ ಪ್ರಶಸ್ತಿಯನ್ನು ದಂಡತೀರ್ಥ ಶಾಲೆ ಉಲಿಯಾರಗೋಳಿ, ಬಾಲಕಿಯರ ವಿಭಾಗದ ಚಾಂಪಿಯನ್ ಮತ್ತು ಕ್ರೀಡಾಕೂಟದ ಸಮಗ್ರ ಚಾಂಪಿಯನ್ ಪ್ರಶಸ್ತಿಯನ್ನು ಶಿರ್ವದ ಡಾನ್ ಬಾಸ್ಕೋ ಶಿಕ್ಷಣ ಸಂಸ್ಥೆ ಗಳಿಸಿತು.

Scroll to Top