ನವದೆಹಲಿ: ಹರಿಯಾಣದಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಬಹುಮತ ಸಾಧಿಸುವ ಮೂಲಕ ಸರ್ಕಾರ ರಚಿಸಲಿರುವ ಬಿಜೆಪಿ ಈಗಾಗಲೇ ಸಂಭ್ರಮಾಚರಣೆಯಲ್ಲಿ ತೊಡಗಿದೆ. ಹರಿಯಾಣ ಚುನಾವಣಾ ಫಲಿತಾಂಶದ ಬಗ್ಗೆ ಇಂದು ಸಂಜೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಇಂದು ಮಧ್ಯಾಹ್ನ ನಾನು ಚುನಾವಣಾ ಆಯೋಗದೊಂದಿಗೆ ಸಂಪರ್ಕದಲ್ಲಿದ್ದೆ. ನನ್ನ ದೂರಿಗೆ ಚುನಾವಣಾ ಆಯೋಗವು ಉತ್ತರಿಸಿದೆ. ನಾನು ಆ ಉತ್ತರಕ್ಕೆ ಉತ್ತರಿಸಿದ್ದೇನೆ. ಎಣಿಕೆಯ ಪ್ರಕ್ರಿಯೆ, ಕನಿಷ್ಠ 3 ಜಿಲ್ಲೆಗಳಲ್ಲಿ ಇವಿಎಂಗಳ ಕಾರ್ಯನಿರ್ವಹಣೆಯ ಕುರಿತು ನಾವು ಅತ್ಯಂತ ಗಂಭೀರವಾದ ದೂರುಗಳನ್ನು ಸ್ವೀಕರಿಸಿದ್ದೇವೆ. ಈ ಮಾಹಿತಿಯನ್ನು ನಾವು ಸಂಗ್ರಹಿಸುತ್ತಿದ್ದೇವೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.
ಹರಿಯಾಣದಲ್ಲಿ ಫಲಿತಾಂಶಗಳು ಸಂಪೂರ್ಣವಾಗಿ ಅನಿರೀಕ್ಷಿತ, ಆಶ್ಚರ್ಯಕರ ಮತ್ತು ಅರ್ಥಗರ್ಭಿತವಾಗಿವೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ. “ಇದು ನೆಲದ ವಾಸ್ತವಕ್ಕೆ ವಿರುದ್ಧವಾಗಿದೆ” ಅವರು ಹೇಳಿದ್ದಾರೆ.
“ಹರಿಯಾಣದಲ್ಲಿ ಫಲಿತಾಂಶಗಳು ಸಂಪೂರ್ಣವಾಗಿ ಅನಿರೀಕ್ಷಿತ ಮತ್ತು ಸ್ವೀಕಾರಾರ್ಹವಲ್ಲ. ಹಿಸಾರ್, ಮಹೇಂದ್ರಗಢ ಮತ್ತು ಪಾಣಿಪತ್‌ನಿಂದ ಇವಿಎಂಗಳಲ್ಲಿನ ವ್ಯತ್ಯಾಸದ ಕುರಿತು ನಮಗೆ ಅನೇಕ ದೂರುಗಳು ಬರುತ್ತಿವೆ. ನಮ್ಮ ಅಭ್ಯರ್ಥಿಗಳು ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ನಾವು ಈ ಎಲ್ಲಾ ದೂರುಗಳನ್ನು ಚುನಾವಣಾ ಆಯೋಗಕ್ಕೆ ನೀಡುತ್ತಿದ್ದೇವೆ” ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಹೇಳಿದ್ದಾರೆ.