ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ!

ಮಹಾರಾಷ್ಟ್ರ: ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಶನಿವಾರ ಬೆಳಿಗ್ಗೆ ಆರಂಭವಾಗಿದ್ದು, ಮತಎಣಿಕೆ ಕೇಂದ್ರದ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಈಗಾಗಲೇ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು ಮಹಾರಾಷ್ಟ್ರದಲ್ಲಿ ಈಗಾಗಲೇ ಅಂಚೆ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಈಗಾಗಲೇ 31 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ ಮಹಾ ವಿಕಾಸ್ ಅಘಾಡಿ 18 ಸ್ಥಾನಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ

ಅಲ್ಲದೆ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಿದ್ದು. ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಅವರು 2,750 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.ಮಹಾರಾಷ್ಟ್ರದಲ್ಲಿ ಪಕ್ಷ ಸಂಪೂರ್ಣವಾಗಿ ಅಧಿಕಾರಕ್ಕೆ ಬರಬೇಕು ಎಂದರೆ 145 ಕ್ಷೇತ್ರಗಳಲ್ಲಿ ಗೆಲುವು ಪಡೆಯಬೇಕಾಗಿದೆ. ಜಾರ್ಖಂಡ್ನಲ್ಲಿ ಪಕ್ಷ ಅಧಿಕಾರ ಚುಕ್ಕಾಣಿ ಹಿಡಿಯಬೇಕಾದರೆ 41 ಸ್ಥಾನಗಳಲ್ಲಿ ಜಯ ಸಾಧಿಸಬೇಕಾಗಿದೆ.

Scroll to Top