ಕರಾವಳಿ, ಮಲೆನಾಡು ಸೇರಿ ರಾಜ್ಯಾದ್ಯಂತ ಇನ್ನು 3 ದಿನ ಭಾರೀ ಮಳೆ: ಹವಾಮಾನ ಇಲಾಖೆಯಿಂದ Yellow Alert!

ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುಂದಿನ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಒಳನಾಡು, ಬೆಂಗಳೂರು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇಂದಿನಿಂದ ನವೆಂಬರ್ 6ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

Scroll to Top