ನಟ ‘ನವೀನ್ ಡಿ ಪಡೀಲ್‌’ ಗೆ ಚಿತ್ರೀಕರಣ ವೇಳೆ ಅವಘಡ, ಆಸ್ಪತ್ರೆಗೆ ದಾಖಲು.!

ಮಂಗಳೂರು: ಕುಸಲ್ದ ಅರಸೆ ಖ್ಯಾತಿಯ ನವೀನ್ ಡಿ ಪಡೀಲ್ ಚಿತ್ರೀಕರಣದ ವೇಳೆ ಬಿದ್ದು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳ್ತಂಗಡಿಯ ಮಡಂತ್ಯಾರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಮೂರು ತಿಂಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ರಂಗಭೂಮಿ ಹಾಗೂ ತುಳು ಸಿನಿಮಾಗಳಲ್ಲಿ ನಟ ನವೀನ್ ಡಿ ಪಡೀಲ್ ಹೆಸರು ಚಿರಪರಿಚಿತ. ಇವರಿಗೆ ತುಳು ಇಂಡಸ್ಟ್ರಿಯಲ್ಲಿ ಸಾಕಷ್ಟು ಜನರು ಅಭಿಮಾನಿ ಬಳಗವಿದೆ. ಕೆಲ ವರ್ಷಗಳ ಹಿಂದೆ ನವೀನ್ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದು ಹಲವಾರು ಚಿತ್ರಗಳಲ್ಲಿ ನಟಿಸಿ ಜನಮನ ಗೆದ್ದಿದ್ದಾರೆ. ನವೀನ್‌ ಪಡೀಲ್‌ ಅವರು ಆದಷ್ಟು ಬೇಗ ಗುಣಮುಖರಾಗಿ ಚೇತರಿಸಿಕೊಂಡು ಮತ್ತೆ ತಮ್ಮ ಜನರನ್ನು ನಗಿಸುವ ಕೆಲಸ ಮಾಡಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸಿದ್ದಾರೆ.

You cannot copy content from Baravanige News

Scroll to Top