ವಿಷಪೂರಿತ ಅಣಬೆಯ ಪದಾರ್ಥ ಸೇವನೆ: ಒಂದೇ ಕುಟುಂಬದ ಇಬ್ಬರು ಬಲಿ

ಬೆಳ್ತಂಗಡಿ: ಕಾಡಿನ ವಿಷ ಪೂರಿತ ಅಣಬೆಯನ್ನು ಸೇವಿಸಿದ ಪರಿಣಾಮ ಒಂದೇ ಕುಟುಂಬದ ಇಬ್ಬರು ಅಸುನೀಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಎಂಬಲ್ಲಿ ನಡೆದಿದೆ.

ಪುದುವೆಟ್ಟು ಮೀಯಾರುಪಾದೆ ಕೇರಿಮಾರು ನಿವಾಸಿಗಳಾದ 75 ವರ್ಷದ ಗುರುವ ಹಾಗು ಇವರ ಪುತ್ರ 45 ವರ್ಷದ ಓಡಿ ವಿಷ ಪೂರಿತ ಅಣಬೆಯನ್ನು ಮೃತಪಟ್ಟ ದುರ್ದೈವಿಗಳಾಗಿದ್ದಾರೆ.ತೀರ ಬಡ ಕುಟುಂಬದ ಮನೆಯಲ್ಲಿ ಗುರುವ ಸಹಿತ ಇಬ್ಬರು ಮಕ್ಕಳು ವಾಸವಾಗಿದ್ದರು. ಮಂಗಳವಾರ ಇವರಿಬ್ಬರ ಮೃತದೇಹ‌ ಮನೆ ಮುಂಭಾಗ ಬಿದ್ದಿರುವುದನ್ನು ಸ್ಥಳೀಯರು ಕಂಡು ಆತಂಕಕ್ಕೀಡಾಗಿದ್ದರು.

ಪರಿಶೀಲಿಸಿದಾಗ ಸೋಮವಾರ ರಾತ್ರಿ ಕಾಡಿನ ಯಾವುದೋ ವಿಷಪೂರಿತ ಅಣಬೆಯನ್ನು ಅಡುಗೆ ಮಾಡಿ ಸೇವಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.ಇದರಿಂದ ಅನಾಹುತ ಸಂಭವಿಸಿದೆ ಎನ್ನಲಾಗಿದೆ. ಮತ್ತೋರ್ವ ಮಗ ಮನೆಯಲ್ಲಿ ಇಲ್ಲದ್ದರಿಂದ ಅವಘಡ ತಪ್ಪಿದೆ.ಘಟನೆ ವಿಚಾರ ತಿಳಿದು ಸ್ಥಳೀಯ ಜನಪ್ರತಿನಿಧಿಗಳು, ಸಾರ್ವಜನಿಕರು ಜಮಾಯಿಸಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣಾಧಿಕಾರಿಗಳು ಭೇಟಿ ನೀಡಿದ್ದು. ತನಿಖೆ ಬಳಿಕ ಸ್ಪಷ್ಟ ಮಾಹಿತಿ ತಿಳಿದು ಬರಬೇಕಿದೆ.

You cannot copy content from Baravanige News

Scroll to Top