ಹೃದಯಾಘಾತ: ಕಾವೂರು ಠಾಣೆಯ ಹೆಡ್ ಕಾನ್ ಸ್ಟೇಬಲ್ ಮೃತ್ಯು

ಕಾವೂರು ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕಳೆದ ಎರಡು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಹನುಮಂತ ಲಮಾಣಿ (38) ಅವರು ಗುರುವಾರ ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ತಮ್ಮ ಊರಾದ ಬಾಗಲಕೋಟೆಯಲ್ಲಿ ಹೋಗಿದ್ದ ವೇಳೆ ಗುರುವಾರ ಮುಂಜಾನೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.2008 ರ ಬ್ಯಾಚ್ ನಲ್ಲಿ ಸೇವೆಗೆ ಸೇರ್ಪಡೆಗೊಂಡಿದ್ದ ಇವರು ಮೂಲತಃ ಬಾಗಲಕೋಟೆಯ ಲವಲೇಶ್ವರ ಗ್ರಾಮದವರಾಗಿದ್ದು ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಈ ಹಿಂದೆ ಮಂಗಳೂರು ಕಮಿಷನರೆಟ್ ವ್ಯಾಪ್ತಿಯ ಮೂಲ್ಕಿ, ಉತ್ತರ ಸಂಚಾರ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ದಕ್ಷ ಸಿಬ್ಬಂದಿ ಎಂದು ಹೆಸರುಗಳಿಸಿದ್ದರು. ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಅಗಲಿದ್ದಾರೆ.

You cannot copy content from Baravanige News

Scroll to Top