ಬೆಂಗಳೂರು: ನೆರೆಯ ಚೀನಾದಲ್ಲಿ ಮಹಾಮಾರಿ ಕೊರೊನಾ ಸೋಂಕಿನ ಹವಾಳಿ ಹೆಚ್ಚಾಗಿದೆ. ದಿನದಿಂದ ದಿನಕ್ಕೆ ಸೋಂಕಿನ ಪ್ರಮಾಣ ಏರುತ್ತಲೇ ಇದೆ. ಹೀಗಾಗಿ ರಾಜ್ಯದಲ್ಲೂ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮುಂದಾಗಿದ್ದು ಈ ಬಗ್ಗೆ ಇಂದು ಸಭೆ ನಡೆಸಿ ಚರ್ಚಿಸಲಿದ್ದಾರೆ. ಮತ್ತೊಂದೆಡೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಆತಂಕ ಮನೆ ಮಾಡಿದೆ. ಮುಂಬರುವ ಕ್ರಿಸ್ಮಸ್, ಹೊಸವರ್ಷಾಚರಣೆಗೆ ಕೊರೊನಾ ಅಡ್ಡಿಪಡಿಸಬಹುದಾ ಎಂಬ ಗೊಂದಲ ಉಂಟಾಗಿದೆ.
ಮುನ್ನೆಚ್ಚರಿಕಾ ಕ್ರಮಕ್ಕೆ ಮುಂದಾದ ಬಿಬಿಎಂಪಿಚೀನಾ ಸೇರಿ ಹಲವು ದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಕೊರೊನಾ ನಿಯಂತ್ರಣ ಸಂಬಂಧ ಸಭೆ ನಡೆಸಲು ಬಿಬಿಎಂಪಿ ಮುಂದಾಗಿದೆ. ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಲಿದ್ದಾರೆ. ಈಗಾಗಲೇ ಬಿಬಿಎಂಪಿ ಹಿರಿಯ ಅಧಿಕಾರಿಗಳ ಆಂತರಿಕ ಚರ್ಚೆಯಾಗುತ್ತಿದ್ದು ಪೂರ್ತಿ ಜಿನೋಮಿಕ್ ಸೀಕ್ವೆನ್ಸ್ ಬಗ್ಗೆ ಗಮನ ವಹಿಸುವಂತೆ ಸೂಚಿಸಲಾಗಿದೆ.