ಮುಲ್ಕಿ, ಜ 02: ಮಂಗಳೂರಿನ ಕಿನ್ನಿಗೋಳಿ ಉಲ್ಲಂಜೆ ಕಟೀಲು ಹೆದ್ದಾರಿಯಲ್ಲಿ ಬಸ್ಸು ಢಿಕ್ಕಿ ಹೊಡೆದು ಬಾಲಕ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.
- ಮೃತ ಬಾಲಕನನ್ನು ಉಲ್ಲಂಜೆ ನಿವಾಸಿ ಚರಣ್ (15) ಗುರುತಿಸಲಾಗಿದೆ ಎಂದು ಗುರುತಿಸಲಾಗಿದೆ.
- ಚರಣ್ ಕಟೀಲು ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದು ಶಾಲೆ ಬಿಟ್ಟು ಮನೆಗೆ ನಡೆದುಕೊಂಡು ಬರುತ್ತಿರುವಾಗ ಈ ದುರಂತ ಸಂಭವಿಸಿದೆ.
- ಇನ್ನು ಕಿನ್ನಿಗೋಳಿ ಕಡೆಯಿಂದ ಕಟೀಲು ಕಡೆಗೆ ಹೋಗುತ್ತಿದ್ದ ಬಸ್ಸು ಉಲ್ಲಂಜೆ ಜುಮಾದಿ ಗುಡ್ಡೆ ತಿರುವು ಬಳಿ ಡಿಕ್ಕಿ ಹೊಡೆದಿದ್ದು, ಅಪಘಾತ ರಭಸಕ್ಕೆ ಬಾಲಕ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಬಜಪೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.