ಕಾರ್ಕಳ: ಖಾಲಿಯಿರುವ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಕಾರ್ಕಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಕಾರ್ಕಳ ತಾಲೂಕಿನ ನಿಟ್ಟೆ, ಮರ್ಣೆ, ಕಡ್ತಲ, ಇನ್ನಾ, ನಂದಳಿಕೆ, ಮುಂಡೂರು, ದುರ್ಗಾ, ಕಲ್ಯಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು ಅರ್ಜಿಗಳನ್ನು ಅವಶ್ಯಕ ದಾಖಲಾತಿಗಳೊಂದಿಗೆ ಫೆ.28 ರಿಂದ ಮಾ.29ರೊಳಗೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಕಾರ್ಕಳ ಇಲ್ಲಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 08258-230992 ಸಂಪರ್ಕಿಸಬಹುದಾಗಿದೆ ಎಂದು ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top