ಬೆಳಪು: ಸಿಗರೇಟ್ ನಲ್ಲಿ ಸೇರಿಸಿ ಗಾಂಜಾ ಸೇವನೆ; ಯುವಕರಿಬ್ಬರು ಪೊಲೀಸ್ ವಶಕ್ಕೆ

ಶಿರ್ವ: ಮಾದಕ ವಸ್ತು ಗಾಂಜಾವನ್ನು ಸಿಗರೇಟ್‌ನಲ್ಲಿ ಸೇರಿಸಿ ಸೇದುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಕಾಪು ತಾಲೂಕಿನ ಬೆಳಪು ಗ್ರಾಮದ ವಿನಯನಗರದ ಬಳಿ ನಡೆದಿದೆ.

ಫೆ.23 ರಂದು ಕಾಪು ತಾಲೂಕಿನ ಬೆಳಪು ಗ್ರಾಮದ ವಿನಯನಗರ ಬಳಿ ಬೆಳಪು ಗ್ರಾಮದ ಸುಫಿಯಾನ(22) ಮತ್ತು ಮುಸ್ತಾಕ್‌ (38) ಎಂಬ ಇಬ್ಬರನ್ನು ಸಿಗರೇಟ್‌ನಲ್ಲಿ ಮಾದಕ ವಸ್ತು ಗಾಂಜಾ ಸೇರಿಸಿ ಸೇದುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು.

ಆಪಾದಿತರು ಗಾಂಜಾ ಮಾದಕ ವಸ್ತು ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ವರದಿ ಬಂದಿದ್ದು, ಇಬ್ಬರ ವಿರುದ್ದ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You cannot copy content from Baravanige News

Scroll to Top