ಚುನಾವಣಾ ಆಯುಕ್ತರ ನೇಮಕಕ್ಕೆ ಹೊಸ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ದೇಶದಲ್ಲಿ ಚುನಾವಣಾ ಆಯುಕ್ತರ ನೇಮಕಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಹೊಸ ಸಮಿತಿಯನ್ನು ರಚಿಸಿದ್ದು, ಆ ಸಮಿತಿಯಲ್ಲಿ ಪ್ರಧಾನಿ, ಲೋಕಸಭೆ ವಿರೋಧ ಪಕ್ಷದ ನಾಯಕರು ಹಾಗೂ ಭಾರತದ ಮುಖ್ಯ ನ್ಯಾಯಮೂರ್ತಿಗಳು ಒಳಗೊಂಡಿರುತ್ತಾರೆ.

ಚುನಾವಣಾ ಮುಖ್ಯ ಆಯುಕ್ತರ ನೇಮಕಕ್ಕೆ ಕೊಲಿಜಿಯಂ ಮಾದರಿ ವ್ಯವಸ್ಥೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂನ ನ್ಯಾ. ಕೆಎಂ ಜೋಸೆಫ್‌ ನೇತೃತ್ವದ ಸಂವಿಧಾನ ಪೀಠ ಈ ತೀರ್ಪು ನೀಡಿದೆ.

ಈ ನೇಮಕಾತಿಗೆ ಕಾನೂನು ರಚಿಸುವವರೆಗೆ ಈ ನಿಯಮ ಮುಂದುವರಿಯುತ್ತದೆ. ಮುಖ್ಯ ಚುನಾವಣಾ ಆಯುಕ್ತರು ಹಾಗೂ ಚುನಾವಣಾ ಆಯುಕ್ತರನ್ನು ತ್ರಿಸದಸ್ಯ ಸಮಿತಿ ಸಲಹೆ ಮೇರೆಗೆ ರಾಷ್ಟ್ರಪತಿಗಳು ಆಯ್ಕೆಗೊಳಿಸುತ್ತಾರೆ ಎಂದು ಪೀಠ ಹೇಳಿದೆ.

ಚುನಾವಣಾ ಆಯುಕ್ತರು ಹಾಗೂ ಮುಖ್ಯ ಚುನಾವಣಾ ಆಯುಕ್ತರ ನೇಮಕಕ್ಕೆ ಕೊಲಿಜಿಯಂ ಮಾದರಿಯ ವ್ಯವಸ್ಥೆಯನ್ನು ಕೋರಿ ಸಲ್ಲಿಸಲಾದ ಅರ್ಜಿಗಳಿಗೆ ಸಂಬಂಧಿಸಿ ಪೀಠವು ತನ್ನ ತೀರ್ಪು ನೀಡಿದೆ.

You cannot copy content from Baravanige News

Scroll to Top