ಬೆಂಗಳೂರು: ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಸುಮಾರು 40 ಲಕ್ಷ ರೂಪಾಯಿಗೂ ಹೆಚ್ಚು ಹಣದ ಸಮೇತ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಕಚೇರಿಯಲ್ಲೇ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ಕೆಎಸ್ ಡಿಎಲ್ ಕಚ್ಛಾ ವಸ್ತುಗಳ ಪೂರೈಕೆ ಸಂಬಂಧ ಟೆಂಡರ್ ಕೊಡಿಸುವ ವಿಚಾರದಲ್ಲಿ ಲಂಚಕ್ಕೆ ಬೇಡಿಕೆ ಇರಿಸಿದ್ದ ಪ್ರಶಾಂತ್ 80 ಲಕ್ಷಕ್ಕೂ ಹೆಚ್ಚು ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು ಎನ್ನಲಾಗಿದೆ.
ಪ್ರಶಾಂತ್, ಬೆಂಗಳೂರು ಜಲಮಂಡಳಿಯ ಚೀಫ್ ಅಕೌಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ.