ಇನ್ ಸ್ಟಾಗ್ರಾಂ ಪರಿಚಯ; ವೈದ್ಯ ದಂಪತಿಯ ಅಪ್ರಾಪ್ತ ಪುತ್ರಿಯ ಮೇಲೆ ಅತ್ಯಾಚಾರ

ಹುಕ್ಕಾ ಬಾರ್‌ನಲ್ಲಿ ತಂಪು ಪಾನೀಯವನ್ನು ಕುಡಿಸಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ವೈದ್ಯ ದಂಪತಿಯ ಪುತ್ರಿ 16 ವರ್ಷದ ಬಾಲಕಿ ಸಾಮಾಜಿಕ ಮಾಧ್ಯಮ ವೇದಿಕೆ ಇನ್ ಸ್ಟಾಗ್ರಾಂ ನಲ್ಲಿ ಆರೋಪಿಯೊಂದಿಗೆ ಸಂಪರ್ಕ ಹೊಂದಿದ್ದಳು.

ಕಾನ್ಪುರದವನಾದ ವಿನಯ್ ಠಾಕೂರ್ ಮತ್ತು ಇತರ ಏಳು ಜನರ ವಿರುದ್ಧ ಹುಡುಗಿಯ ತಂದೆ ಪ್ರಕರಣ ದಾಖಲಿಸಿದ್ದಾರೆ. ವಿನಯ್ ಠಾಕೂರ್ ಮಾರ್ಚ್ 4 ರಂದು ಕರ್ರಾಹಿಯ ಕೆಫೆಗೆ ಹುಡುಗಿಯನ್ನು ಕರೆಸಿಕೊಂಡು, ಅಲ್ಲಿ ಅವರು ಹುಕ್ಕಾ ಸೇದಿದರು ಎಂದು ತಂದೆಯ ದೂರಿನಲ್ಲಿ ತಿಳಿಸಲಾಗಿದೆ.

ವಿನಯ್ ಬಾಲಕಿಯ ಪಾನೀಯದಲ್ಲಿ ಸ್ವಲ್ಪ ನಿದ್ರಾಜನಕವನ್ನು ಹಾಕಿ, ಅವಳನ್ನು ಹೊರಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ದೂರು ದಾಖಲಾಗಿದೆ. ಬಾಲಕಿಯನ್ನು ಮತ್ತೊಂದು ನಿರ್ಜನ ಸ್ಥಳಕ್ಕೆ ಕರೆದೊಯ್ದಿದ್ದು, ಅಲ್ಲಿ ಆತನ ಏಳು ಮಂದಿ ಸ್ನೇಹಿತರು ಸೇರಿಕೊಂಡು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಬಾಲಕಿ ಹಲ್ಲೆಗೆ ಪ್ರತಿರೋಧ ವ್ಯಕ್ತಪಡಿಸಿದ್ದು, ಈ ವೇಳೆ ಆರೋಪಿ ಆಕೆಯ ದೇಹದಾದ್ಯಂತ ಕಚ್ಚಿದ್ದಾನೆ. ಬಾಲಕಿ ಮನೆಗೆ ಬಂದು ತನಗಾದ ಕಷ್ಟವನ್ನು ವಿವರಿಸಿದ ನಂತರ ತಂದೆ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಇದೀಗ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ

You cannot copy content from Baravanige News

Scroll to Top