ಉಡುಪಿ: ಕಿನ್ನಿಮೂಲ್ಕಿ ಪೆಟ್ರೋಲ್ ಬಂಕ್ ಬಳಿ ಬೈಕಿಗೆ ಬಸ್ ಡಿಕ್ಕಿಯಾಗಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ.
ಬಸ್ ಪೆಟ್ರೋಲ್ ಬಂಕ್‍ನಲ್ಲಿ ಡೀಸೆಲ್ ತುಂಬಿಸಿಕೊಂಡು ಬರುತ್ತಿದ್ದಾಗ ಈ ಘಟನೆ ನಡೆದಿದೆ.
ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಸ್ ಚಾಲಕ ರಾಂಗ್ ಸೈಡ್ ನಲ್ಲಿ ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.