ಉಳ್ಳಾಲ : ತಾಲೂಕಿನ ಪೆರ್ಮನ್ನೂರು ಗ್ರಾಮದ ಪಂಡಿತ್ ಹೌಸ್ ವಿಜೇತ ನಗರದಲ್ಲಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿಕೊಂಡ ಮಹಿಳೆಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಅನೈತಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ ಎಂಬುದಾಗಿ ದೊರೆತ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿ ರುಕಿಯಾ (50) ಎಂಬಾಕೆಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಬಂಟ್ವಾಳದ ಬೋಳಂತೂರು ಗ್ರಾಮದ ವಿಟ್ಲಕೋಡಿ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.
ಉಳ್ಳಾಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಸಂದೀಪ್.ಜಿ.ಎಸ್, ಪೊಲೀಸ್ ಉಪ- ನಿರೀಕ್ಷಕರಾದ ಮಂಜುಳಾ ಎಲ್. ಹಾಗೂ ಸಿಬಂದಿಗಳು ದಾಳಿ ನಡೆಸಿ ಪ್ರಕರಣವನ್ನು ಪತ್ತೆ ಹಚ್ಚಿದ್ದಾರೆ. ಲತೀಫ್ ಎಂಬಾತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆತನ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬಂಧಿತ ರುಕಿಯಾ ಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
3 ದ್ವಿಚಕ್ರ ವಾಹನಗಳು, 9 ಮೊಬೈಲ್ ಫೋನ್‌ಗಳು, 5,000 ರೂ. ನಗದು ಸೇರಿ1,76,580 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಾನ್ಯ ಸಹಾಯಕ ಪೊಲೀಸ್ ಆಯುಕ್ತರು, ಮಂಗಳೂರು ದಕ್ಷಿಣ ಉಪ ವಿಭಾಗ ರವರ ಮಾರ್ಗದರ್ಶನದಂತೆ ಕಾರ್ಯಾಚರಣೆ ನಡೆಸಲಾಗಿದೆ.