ಕರಾವಳಿಯಲ್ಲಿ ಮುಂದಿನ 48 ಗಂಟೆ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

ಮುಂದಿನ 48 ಗಂಟೆಗಳಲ್ಲಿ ಕರಾವಳಿ ಪ್ರದೇಶದ ಒಂದೆರುಡು ಪ್ರದೇಶಗಳಲ್ಲಿ ಬಿಸಿ ಗಾಳಿ ಉಂಟಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಮಾರ್ಚ್ 9 ಮತ್ತು 10ರಂದು ಬಿಸಿ ಗಾಳಿ ಉಂಟಾಗುವ ಸಾಧ್ಯತೆ ಇದೆ ಎಂದು ಇಲಾಖೆ ಅಧಿಕಾರಿಗಳು ಗುರುವಾರ ಮಾಹಿತಿ ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ಝಳ ಹೆಚ್ಚಿದ್ದು, ಕಾದ ಕಬ್ಬಿಣದಂತಾದ ನೆಲದಲ್ಲಿ ಜನ ನಡೆದಾಡಲೂ ಸಂಕಷ್ಟಪಡುವಂತಾಗಿದೆ. ಮಧ್ಯಾಹ್ನ ವೇಳೆಗೆ ಬಿಸಿಲಿನ ತೀವ್ರತೆ ಹೆಚ್ಚುತ್ತಿದ್ದು, ಮನೆಯಿಂದ ಹೊರ ಬಾರಲೂ ಕಷ್ಟಪಡಬೇಕಾದ ಸ್ಥಿತಿ ಇದೆ. ಕಳೆದ ಕೆಲ ದಿನಗಳ ಹಿಂದಷ್ಟೇ ಕರಾವಳಿ ಜಿಲ್ಲೆಗಳಲ್ಲಿ ಹೀಟ್‌ ವೇವ್ ಎಚ್ಚರಿಕೆ ನೀಡಲಾಗಿತ್ತು. ಆದರೆ ಭಾನುವಾರದಿಂದ ಗರಿಷ್ಠ ಉಷ್ಣಾಂಶದಲ್ಲಿ ಸ್ವಲ್ಪ ಇಳಿಕೆಯಾದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಈ ಎಚ್ಚರಿಕೆಯನ್ನು ಹಿಂಪಡೆದಿತ್ತು. ಇದೀಗ ಮತ್ತೆ ಬಿಸಿ ಗಾಳಿ ಎಚ್ಚರಿಕೆಯನ್ನು ಇಲಾಖೆ ನೀಡಿದೆ..

You cannot copy content from Baravanige News

Scroll to Top