ಧ್ರುವನಾರಾಯಣ್‌ ನಿಧನ : ಪ್ರಜಾಧ್ವನಿ ಯಾತ್ರೆ ರದ್ದು

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ ರವರ ನಿಧನದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಎಲ್ಲಾ ಪ್ರಜಾಧ್ವನಿ ಸಮಾವೇಶವನ್ನು ಮುಂದೂಡಲಾಗಿದೆ ಎಂದು ವರದಿಯಾಗಿದೆ.

ಧ್ರುವ ನಾರಾಯಣ್‌ ನಿಧನದ ಹಿನ್ನೆಲೆ ರಾಜ್ಯದ ಹಲವು ಕಡೆ ನಡೆಯಬೇಕಿದ್ದ ಪ್ರಜಾಧ್ವನಿ ಸಮಾವೇಶವನ್ನು ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ತಿಳಿಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ ಅವರು ಇಂದು ಹೃದಯಾಘಾತದಿಂದ ಮೈಸೂರಿನ ಡಿಆರ್‌ಎಂಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ 2 ವರ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಈ ಬಾರಿ ನಂಜನಗೂಡಿನಿಂದ ವಿಧಾನಸಭೆ ಚುನಾವಣೆ ಸ್ಪರ್ಧೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು.

Scroll to Top