ಮುಂದಿನ ನಾಲ್ಕು ದಿನ ಕರಾವಳಿ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ- ಹವಾಮಾನ ಇಲಾಖೆ ಎಚ್ಚರಿಕೆ

ಉಡುಪಿ: ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಕರ್ನಾಟಕದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.


ಮಾರ್ಚ್ 15ರಿಂದ ಮಾರ್ಚ್ 19ರವರೆಗೆ ಕರಾವಳಿ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಗುಡುಗು ಸಹಿತ ಸಿಡಿಲು ಸಹಿತ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಲಿನ ಝಳಕ್ಕೆ ಜನ ತತ್ತರಿಸಿ ಹೋಗಿದ್ದು, ಮಂಗಳೂರು, ಸುಳ್ಯ ಮುಂತಾದೆಡೆ ಪ್ರಖರ ಬಿಸಿಲಿಗೆ ಮನೆಯಿಂದ ಹೊರಬರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಮಧ್ಯಾಹ್ನದ ವೇಳೆಗೆ ಬಿಸಿಲಿನ ಪ್ರಖರತೆ ಹೆಚ್ಚಿದ್ದು, ಕಳೆದ ಕೆಲವು ದಿನಗಳಲ್ಲಿ ಜನ ಬಿಸಿ ಗಾಳಿಯನ್ನೂ ಅನುಭವಿಸಿದ್ದರು.

You cannot copy content from Baravanige News

Scroll to Top