ಉಡುಪಿ: ಜಿಲ್ಲೆಯಲ್ಲಿ ಶೇ.100 ರಷ್ಟು ಮತದಾನ ನಡೆಯಬೇಕೆಂಬ ಗುರಿಯನ್ನು ಸ್ವೀಪ್ ಸಮಿತಿಯು ಹೊಂದಿದೆ. ಮತದಾರರು ಯವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಮತ ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿ ಕೂಮಾರಾವ್ ಎಂ. ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಸ್ವೀಪ್ ಚುನಾವಣೆ ಇ- ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಜಿಲ್ಲಾ ಸ್ವೀಪ್ ಸಮಿತಿಯು ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಹಾಗೂ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಿಕೆ ಕುರಿತು ವಿವಿಧ ಕಾರ್ಯಕ್ರಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಲ್ಲಿ ಚುನಾವಣೆ ಜಾಗೃತಿ ಮೂಡಿಸುತ್ತಿದೆ. ಇ – ಪತ್ರಿಕೆ ಮೂಲಕ ಇನ್ನಷ್ಟು ಪ್ರಚಾರ ಮಾಡಲಿದೆ ಎಂದರು.
ಜಿ.ಪಂ. ಸಿಇಒ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಪ್ರಸನ್ನ ಎಚ್. ಮಾತನಾಡಿ, ಚುನಾವಣೆ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕು ಎಂದರು.
ಎಸ್ಪಿ ಹಾಕೇ ಅಕ್ಷಯ್ ಮಚ್ಚೀಂದ್ರ, ಅಪರ ಜಿಲ್ಲಾಧಿಕಾರಿ ವೀಣಾ, ತಾಲೂಕು ಚುನಾವಣೆ ಅಧಿಕಾರಿಗಳು ಉಪಸ್ಥಿತರಿದ್ದರು.