ಶಿರ್ವ: ಶಿರ್ವ ಮೆಸ್ಕಾಂ ವ್ಯಾಪ್ತಿಯಲ್ಲಿ ಆಗುತ್ತಿರುವ ನಿರಂತರ, ಅನಿಯಮಿತ ವಿದ್ಯುತ್ ಕಡಿತದಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಇದರಿಂದ ಬೇಸತ್ತ ಜನರಿಂದ ನಾಳೆ ಬೆಳಿಗ್ಗೆ 10:00 ಗಂಟೆಗೆ ಶಿರ್ವ ಮೆಸ್ಕಾಂ ಕಚೇರಿ ಮುಂದೆ ಬೃಹತ್ ಪ್ರತಿಭಟನೆಯನ್ನು ಕೈಗೊಳ್ಳಲಾಗಿದೆ.
ಪ್ರತಿದಿನ ರಾತ್ರಿ-ಹಗಲೆನ್ನದೆ ನಿರಂತರವಾಗಿ ವಿದ್ಯುತ್ ಕಡಿತಗೊಳ್ಳುತ್ತಿದೆ, ಮಳೆಗಾಲದಲ್ಲಿ ಮರಗಳು ತಂತಿ ಮೇಲೆ ಬೀಳುವುದರಿಂದ ಸಮಸ್ಯೆ ಎದುರಾಗುತ್ತಿದೆ, ಆದರೆ ಈ ಸಮಸ್ಯೆಗಳನ್ನು ಎದುರಿಸಲು ಶಿರ್ವ ಮೆಸ್ಕಾಂ ಕಚೇರಿಯಲ್ಲಿ ಸಿಬ್ಬಂದಿಗಳ ಕೊರತೆ ಎದ್ದು ಕಾಣುತ್ತಿದೆ.
ಅಧಿಕಾರಿಗಳು ಪ್ರತಿಭಟನೆಯ ಸ್ಥಳಕ್ಕೆ ಖುದ್ದಾಗಿ ಬಂದು ವಿದ್ಯುತ್ ಕಡಿತದ ಸಮಸ್ಯೆಗೆ ಶಾಶ್ವತವಾಗಿ ಪರಿಹಾರ ನೀಡಬೇಕೆಂಬುದೇ ಪ್ರತಿಭಟನೆಯ ಮುಖ್ಯ ಉದ್ದೇಶವಾಗಿದೆ.