ಕಾರ್ಕಳ(ಮಾ.18): ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರು ಹೈಸ್ಕೂಲ್ ಬಳಿಯ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಮಟ್ಕಾ ಜುಗಾರಿ ಆಟಕ್ಕೆ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಓರ್ವನನ್ನು ಕಾರ್ಕಳ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಕಾರ್ಕಳ ನಗರ ಠಾಣೆಯ ಪೊಲೀಸರು ಎರ್ಲಪಾಡಿ ಗ್ರಾಮದ ಬೈಲೂರು ಹೈಸ್ಕೂಲ್ ಬಳಿಯ ಸಾರ್ವಜನಿಕ ಸ್ಥಳಕ್ಕೆ ದಾಳಿ ಮಾಡಿ ಸ್ಥಳದಲ್ಲಿ ಸಾರ್ವಜನಿಕರಿಂದ ಮಟ್ಕಾ ಜುಗಾರಿ ಆಟಕ್ಕೆ ಹಣ ಸಂಗ್ರಹಿಸುತ್ತಿದ್ದ ಮೊಹಮ್ಮದ್ (65) ಎಂಬಾತನನ್ನು ವಶಕ್ಕೆ ಪಡೆದು ಆತನ ಬಳಿ ಇದ್ದ ಸಾರ್ವಜನಿಕರಿಂದ ಸಂಗ್ರಹಿಸಿದ್ದ 1,150 ರೂ. ನಗದು ಹಾಗೂ ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.