ಉಡುಪಿ ಶ್ರೀಕೃಷ್ಣ ಮಠಕ್ಕೆ ವಿದೇಶಾಂಗ ಸಚಿವ ಜೈಶಂಕರ್ ಭೇಟಿ

ಉಡುಪಿ (ಮಾರ್ಚ್ 19) : ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಉಡುಪಿಯ ಕೃಷ್ಣ ಮಠಕ್ಕೆ ಭೇಟಿನೀಡಿ ದೇವರ ದರ್ಶನ ಪಡೆದರು.

ಮಣಿಪಾಲದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ ಅವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು ಬಳಿಕ ಪರ್ಯಾಯ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಅವರನ್ನು ಭೇಟಿಮಾಡಿ ಅನುಗ್ರಹ ಪ್ರಸಾದ ಸ್ವೀಕರಿಸಿದರು.

ನಂತರ ಅಮೃತ್ ಗಾರ್ಡನ್‌ನಲ್ಲಿ ಮಣಿಪಾಲದ ಮಾಹೆ ವಿಶ್ವವಿದ್ಯಾಲಯದ ಟ್ಯಾಪ್ಮಿ ವಿಭಾಗ ಆಯೋಜಿಸಿದ್ದ ನಾಯಕತ್ವ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

You cannot copy content from Baravanige News

Scroll to Top