ನವದೆಹಲಿ (ಮಾ 20): ರಾಜ್ಯದಲ್ಲಿ ಐದನೇ ಹಾಗೂ ಎಂಟನೇ ತರಗತಿ ಪಭ್ಲಿಕ್ ಪರೀಕ್ಷೆಯನ್ನು ನಡೆಸುವ ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ ಇದೀಗ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ.
ಈ ಮೂಲಕ ಈ ಪ್ರಕರಣದ ತುರ್ತು ವಿಚಾರಣೆಗೆ ನಡೆಸಲು ಸುಪ್ರೀಂಕೋರ್ಟ್ ಗೆ ವಕೀಲರು ಮನವಿ ಮಾಡಿದ್ದಾರೆ. ಮಾರ್ಚ್ 27ರಿಂದ ಪರೀಕ್ಷೆಗಳು ಆರಂಭವಾಗಲಿದೆ ಎಂಬ ವಕೀಲರ ಮನವಿಗೆ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದು ಬೇಡ. ರಾಜ್ಯದಲ್ಲಿ ಯಾವುದು ಉತ್ತಮವೆಂದು ಹೈಕೋರ್ಟ್ಗೆ ತಿಳಿದಿದೆ ಎಂದು ಸಿಜೆಐ ಡಿ.ವೈ.ಚಂದ್ರಚೂಡ್ ಹೇಳಿದ್ದಾರೆ.
“ನಾವು 4,000 ಶಾಲೆಗಳನ್ನು ಪ್ರತಿನಿಧಿಸುತ್ತೇವೆ. ನಮ್ಮ ವಾದ ಆಲಿಸಬೇಕೆಂದು” ಸಿಜಿಐ ಚಂದ್ರಚೂಡ್ ಅವರಿಗೆ ವಕೀಲರು ಮನವಿ ಮಾಡಿದ್ದಾರೆ. ಇದಾದ ಬಳಿಕ ಮುಂದಿನ ಸೋಮವಾರ ಅಂದರೆ ಮಾರ್ಚ್ 27 ರಂದು ವಿಚಾರಣೆ ನಡೆಸುವುದಾಗಿ ಸಿ.ಜೆ.ಐ ಹೇಳಿದ್ದಾರೆ.
ಈ ನಡುವೆ ಮಾರ್ಚ್ 27ರಿಂದಲೇ ಪರೀಕ್ಷೆಗಳು ಪ್ರಾರಂಭವಾಗುವ ಕಾರಣ ವಿದ್ಯಾರ್ಥಿಗಳು ಪೋಷಕರು ಮತ್ತೆ ಗೊಂದಲಕ್ಕೆ ಸಿಲುಕಿದ್ದಾರೆ.