ಮೋದಿ ಉಪನಾಮ ಟೀಕೆ, ರಾಹುಲ್ ಗಾಂಧಿ ದೋಷಿ ಎಂದು ಸೂರತ್ ನ್ಯಾಯಾಲಯದಿಂದ ಮಹತ್ವದ ತೀರ್ಪು ಪ್ರಕಟ

ಸೂರತ್ (ಮಾ. 23): ಮೋದಿ ಉಪನಾಮ ಹೇಳಿಕೆಗಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಅವರನ್ನು ಸೂರತ್ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ.


ಐಪಿಸಿ ಸೆಕ್ಷನ್ 504 ರ ಅಡಿಯಲ್ಲಿ ರಾಹುಲ್ ಗಾಂಧಿ ಅವರಿಗೆ ಶಿಕ್ಷೆ ವಿಧಿಸಲಾಗಿದ್ದು ಈ ಸೆಕ್ಷನ್ ಅಡಿಯಲ್ಲಿ ಗರಿಷ್ಠ ಎರಡು ವರ್ಷಗಳ ಸಂಭವನೀಯ ಶಿಕ್ಷೆ ನೀಡಲಾಗುತ್ತದೆ.

ಎಲ್ಲಾ ಕಳ್ಳರು ಮೋದಿಯನ್ನು ಸಾಮಾನ್ಯ ಉಪನಾಮವನ್ನಾಗಿ ಮಾಡಿಕೊಂಡಿರುವುದು ಹೇಗೆ? ಎಂದು ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಇನ್ನು ಬಿಜೆಪಿ ಶಾಸಕ ಮತ್ತು ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿತ್ತು ರಾಹುಲ್ ಗಾಂಧಿಗೆ 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದ್ದ ಸೂರತ್ ನ್ಯಾಯಾಲಯ ಇದೀಗ 30 ದಿನಗಳಿಗೆ ಜಾಮೀನು ಮಂಜೂರು ಮಾಡಿದೆ.

You cannot copy content from Baravanige News

Scroll to Top