23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಟೆಂಡ್ ಆರೋಪಿಯ ಬಂಧನ..!!

23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಟೆಂಡ್ ವಾರಂಟ್ ಆರೋಪಿ ಅಜರುದ್ದೀನ್ ನನ್ನ ಬಂಧಿಸುವಲ್ಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿ ಅಜರುದ್ದೀನ್ ಅಲಿಯಾಸ್ ಅಜರ್ (ನಾಥು)(29) ಕೃಷ್ಣಾಪುರ, ಕಾಟಿಪಳ್ಳ ಗ್ರಾಮದವನಾಗಿದ್ದು, ಈತನ ಮೇಲೆ ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳಲ್ಲಿ ಜಾಮೀನು ರಹಿತ ವಾರಂಟ್ ಇದೆ.

ಮಂಗಳೂರು ಪೊಲೀಸು ಆಯುಕ್ತರ ಆದೇಶದ ಮೇರೆಗೆ ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಆಯುಕ್ತರಾದ ಮನೋಜ್‌ ಕುಮಾರ್‌ರವರ ನಿರ್ದೇಶನದಂತೆ ಮಾರ್ಚ್ 22 ರಂದು ಸುರತ್ಕಲ್ ಪೊಲೀಸ್ ಠಾಣೆಯ ನಿರೀಕ್ಷಕರಾದ ಮಹೇಶ್‌ ಪ್ರಸಾದ್‌ ನೇತೃತ್ವದಲ್ಲಿ, ಉಪನಿರೀಕ್ಷಕರಾದ ಮಲ್ಲಿಕಾರ್ಜುನ್‌, ಸಿಬಂದಿಗಳಾದ ಅಜಿತ್ ಮ್ಯಾಥ್, ಮಣಿಕಂಠ, ಕಾರ್ತಿಕ್ ಅವರ ತಂಡ ಬಂಧಿಸಿದೆ.

ಮಂಗಳೂರು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

You cannot copy content from Baravanige News

Scroll to Top