Sunday, September 8, 2024
Homeಸುದ್ದಿರಾಜ್ಯ2 ವರ್ಷ ಜೈಲು ಶಿಕ್ಷೆ ಬೆನ್ನಲ್ಲೆ ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ

2 ವರ್ಷ ಜೈಲು ಶಿಕ್ಷೆ ಬೆನ್ನಲ್ಲೆ ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ

ನವದೆಹಲಿ (ಮಾರ್ಚ್ 24) : ಮಾನಹಾವಿ ಪ್ರಕರಣವೊಂದರಲ್ಲಿ 2 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಸಂಸದ ರಾಹುಲ್ ಗಾಂಧಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.


ಮೋದಿ ಸಮುದಾಯಕ್ಕೆ ಅವಮಾನಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯ ಎರಡು ವರ್ಷಗಳ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭಾ ಕಾರ್ಯದರ್ಶಿ ಉತ್ಪಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು. ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News