ಪಡುಬಿದ್ರಿ (ಮಾ 27) : 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಹೆಜಮಾಡಿ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ನಡೆಸಿದ ತಪಾಸಣೆ ವೇಳೆ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ5 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.
ಪಡುಬಿದ್ರಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರ ಪುರುಷೋತ್ತಮ ಎ ಇವರು ಹೆಜಮಾಡಿ ಚೆಕ್ ಪೋಸ್ಟ್ ನಲ್ಲಿ ಮಾ. 26ರಂದು ಕರ್ತವ್ಯದಲ್ಲಿರುವಾಗ ಸಂಜೆ 4:35ರ ವೇಳೆಗೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಟೊಯೆಟಾ ಗ್ಲಾಂಝಾ ಬಿಳಿ ಬಣ್ಣದ ಕಾರನ್ನು ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಚಾಲಕನ ಎಡ ಬದಿಯ ಟೂಲ್ಸ್ ಬಾಕ್ಸ್ ಒಳಗಡೆ ಕೈ ಚೀಲ ದೊರಕ್ಕಿದ್ದು, ಇದನ್ನು ಪರಿಶೀಲಿಸಿದಾಗ ಅದರೊಳಗೆ 500 ರೂಪಾಯಿ ಮುಖ ಬೆಲೆಯ ಭಾರತೀಯ ಕರೆನ್ಸಿ ನೋಟುಗಳಿರುವ ಒಟ್ಟು ಸೇರಿಸಿ ಬಂಡಲ್ ಮಾಡಿ ಇಟ್ಟಿರುವ ಹಣ ಕಂಡುಬಂದಿದೆ.
ಈ ಹಣದ ಕುರಿತು ಕಾರಿನ ಚಾಲಕ ಅಹಮ್ಮದ್ ಕಬೀರ್ ಹಾಗೂ ಕಾರಿನಲ್ಲಿದ್ದ ಅಬ್ದುಲ್ ಖಾದರ್ ಜೈಲಾನಿ ಎಂಬುವರನ್ನು ವಿಚಾರಿಸಿದಾಗ ಈ ಹಣದ ಬಗ್ಗೆ ದಾಖಲಾತಿ ಹಾಗೂ ತೃಪ್ತಿಕರವಾದ ಉತ್ತರವನ್ನು ನೀಡಿರುವುದಿಲ್ಲ, ಆದ್ದರಿಂದ ರೂಪಾಯಿ 5 ಲಕ್ಷ ಹಣ ಮತ್ತು ಕಾರನ್ನು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 38/2023, ಕಲಂ: 98 ಕೆ.ಪಿ. ಕಾಯ್ದೆ. ಯಂತೆ ಪ್ರಕರಣ ದಾಖಲಾಗಿದೆ.