ಗಂಗೊಳ್ಳಿ/ಶಿರ್ವ ಮಾ.28: ಮಟ್ಕಾ ಜುಗಾರಿ ಪ್ರಕರಣಕ್ಕೆ ಸಂಬಂಧಿಸಿ ಗಂಗೊಳ್ಳಿ ಹಾಗೂ ಶಿರ್ವ ಠಾಣಾ ವ್ಯಾಪ್ತಿಯಲ್ಲಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಗಂಗೊಳ್ಳಿ ಠಾಣಾ ಪೊಲೀಸರು ನಿನ್ನೆ ಕುಂದಾಪುರ ತಾಲೂಕು ಗಂಗೊಳ್ಳಿ ಗ್ರಾಮದ ಗಂಗೊಳ್ಳಿ ಅರೆಕಲ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ಸುರೇಶ ಶೇರುಗಾರ(47) ಎಂಬಾತನನ್ನು ವಶಕ್ಕೆ ಪಡೆದು ಆತನಿಂದ 520 ರೂ. ನಗದು ಹಾಗೂ ಆಟಕ್ಕೆ ಬಳಸಿದ ಇತರ ವಸ್ತುಗಳನ್ನು ವಶಪಡೆದು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮತ್ತೊಂದೆಡೆ ನಿನ್ನೆ ಶಿರ್ವ ಪೊಲೀಸರು ಕಳತ್ತೂರು ಗ್ರಾಮದ ಪುಂಚಲಕಾಡು ಎಂಬಲ್ಲಿನ ಬಾರ್ ವೊಂದರ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟಕ್ಕೆ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ನಾಗೇಶ್ ಕುಮಾರ್ ಎಂಬಾತನನ್ನು ವಶಕ್ಕೆ ಪಡೆದು ಆತನ ವಿರುದ್ಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.