ಕೇರಳ (ಮಾ.31) : ಖಾಲಿ ಮನೆಯೊಂದರಲ್ಲಿ ಭಾರೀ ಪ್ರಮಾಣದ ನಿಷೇಧಿತ 1000 ಮುಖಬೆಲೆಯ ನಕಲಿ ನೋಟುಗಳನ್ನು ಕೇರಳ ಪೊಲೀಸರು ಗುರುವಾರ ವಶಪಡಿಸಿಕೊಂಡಿದ್ದಾರೆ.
ಕಾಸರಗೋಡು ಜಿಲ್ಲೆಯ ಬದಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಿಷೇಧಿತ 1000 ರೂ.ಗಳ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರ ಹಿಂದೆ ರಿಯಲ್ ಎಸ್ಟೇಟ್ ಡೀಲರ್ಗಳ ಪಾತ್ರವಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ರಾತ್ರಿ ವೇಳೆ ಖಾಲಿ ಮನೆಯಲ್ಲಿ ಅನುಮಾನಾಸ್ಪದ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಎಸ್ಐ ಮ್ಯಾಥ್ಯೂ, ಎಎಸ್ಐ ಮಾಧವನ್, ಸಿಪಿಒ ದಿನೇಶ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಲಾಗಿದೆ ಎಂದು ಬದಿಯಡ್ಕ ಎಸ್ಐ ಕೆ.ಪಿ.ವಿನೋದ್ ಕುಮಾರ್ ತಿಳಿಸಿದ್ದಾರೆ. ದಾಳಿ ವೇಳೆ ಹಾಸಿಗೆಯ ರೂಪದಲ್ಲಿ ಸಂಗ್ರಹಿಸಿಟ್ಟಿದ್ದ ಕರೆನ್ಸಿಗಳನ್ನು ಪತ್ತೆ ಹಚ್ಚಿದ್ದಾರೆ. ಹೀಗೆ ಪತ್ತೆಯಾದ ನಕಲಿ ನೋಟುಗಳನ್ನು ಆರು ದೊಡ್ಡ ಚೀಲಗಳಲ್ಲಿ ತುಂಬಿಸಬಹುದಾಗಿದೆ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.
ಕೆಲವು ಹಣದ ಬಂಡಲ್ಗಳಲ್ಲಿ, ನಕಲಿ ನೋಟುಗಳ ಒಳಗೆ ಬಿಳಿ ಕಾಗದಗಳನ್ನು ಇಡಲಾಗಿತ್ತು. ಪ್ರಾಥಮಿಕ ತನಿಖೆಯ ಪ್ರಕಾರ, ಕೆಲವು ರಿಯಲ್ ಎಸ್ಟೇಟ್ ವಿತರಕರು ಇದರ ಹಿಂದೆ ಇದ್ದಾರೆ ಎನ್ನಲಾಗುತ್ತಿದ್ದು, ಅವರ ಬಳಿ ಸಾಕಷ್ಟು ಹಣವಿರುವ ಕುರಿತು ಅನುಮಾನಗಳು ವ್ಯಕ್ತವಾಗಿವೆ ಎಂದು ಹೇಳಿದರು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನೂ ಯಾರನ್ನೂ ಬಂಧಿಸಿಲ್ಲ.