ರಾಮನ ಮೂರ್ತಿ ಮೇಲೆ ನಿಂತು ಪೋಸ್ ಕೊಟ್ಟ ಬಿಜೆಪಿ ಶಾಸಕ: ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್

ರಾಮನವಮಿಯಂದೇ ಬಸವ ಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗಾರ ಅವರು ರಾಮನಿಗೆ ಅವಮಾನ ಮಾಡಿದ್ದಾರೆ ಎಂಬ ಆಪಾದನೆ ಕೇಳಿಬಂದಿದೆ.

ಅವರು ಬಸವಕಲ್ಯಾಣದಲ್ಲಿ ರಾಮನ ಪ್ರತಿಕೃತಿ ತೊಡೆ ಮೇಲೆ ನಿಂತು ಕೊರಳಿಗೆ ಹೂವಿನ ಹಾರ ಹಾಕಿದ್ದಾರೆ. ಅಲ್ಲದೇ ಕೈ ಮುಗಿದು ಫೋಟೋಗೆ ಫೋಸ್ ಕೊಟ್ಟಿದ್ದಾರೆ. ಇದೀಗ ಎಲ್ಲಾ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.

ಶ್ರೀರಾಮನ ನವಮಿಯಂದು ಬಿಜೆಪಿ ಶಾಸಕ ಮಾಡಿಕೊಂಡಿರುವ ಎಡವಟ್ಟಿನ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಮೂಲಕ ಶಾಸಕರು ಬಸವಣ್ಣನ ಕರ್ಮಭೂಮಿ ಬಸವಕಲ್ಯಾಣದಲ್ಲಿ ಶ್ರೀರಾಮನಿಗೆ ಅವಮಾನ ಮಾಡಿದ್ರಾ ಎಂಬ ಪ್ರಶ್ನೆ ಹುಟ್ಟಿದೆ.

ಬಸವಕಲ್ಯಾಣದಲ್ಲಿ ನಡೆದ ಶ್ರೀರಾಮನ ಶೋಭಾಯಾತ್ರೆ ವೇಳೆ ಬಸವಕಲ್ಯಾಣ ಶಾಸಕ ಶರಣು ಸಲಗರ್ ಅವರು ಶ್ರೀರಾಮನ ಎಡಗಡೆಯ ತೊಡೆ ಮೇಲೆ ನಿಂತು ಕೊರಳಿಗೆ ಹೂವಿನ ಹಾರ ಹಾಕಿ ಪೋಸ್ ಕೊಟ್ಟಿದ್ದಾರೆ. ಈ ದೃಶ್ಯವನ್ನು ನೆರೆದಿದ್ದವರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದು, ಇದೀಗ ಈ ವೀಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ. ಅಲ್ಲದೆ ಶಾಸಕರ ನಡೆಗೆ ಭಾರೀ ಖಂಡನೆ ವ್ಯಕ್ತವಾಗುತ್ತಿದೆ.

Baravanige News

Translate »

You cannot copy content from Baravanige News

Scroll to Top