Sunday, September 8, 2024
Homeಸುದ್ದಿರಾಷ್ಟ್ರೀಯಭಾರತದಲ್ಲಿ ಕೋವಿಡ್ ಹೆಚ್ಚಳ : ವಕೀಲರು ಕೋರ್ಟ್ ಗೆ ಬರುವ ಅವಶ್ಯಕತೆ ಇಲ್ಲ..- ನ್ಯಾ.ಡಿ.ವೈ ಚಂದ್ರಚೂಡ

ಭಾರತದಲ್ಲಿ ಕೋವಿಡ್ ಹೆಚ್ಚಳ : ವಕೀಲರು ಕೋರ್ಟ್ ಗೆ ಬರುವ ಅವಶ್ಯಕತೆ ಇಲ್ಲ..- ನ್ಯಾ.ಡಿ.ವೈ ಚಂದ್ರಚೂಡ

ದೇಶದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ವಕೀಲರು ನ್ಯಾಯಾಲಯಕ್ಕೆ ಹಾಜರಾಗುವ ಅವಶ್ಯಕತೆ ಇಲ್ಲ, ಆನ್‌ಲೈನ್ ಮೂಲಕ ಪ್ರಕರಣಗಳ ಬಗ್ಗೆ ವಾದ ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ತಿಳಿಸಿದ್ದಾರೆ.

ದೇಶದಲ್ಲಿ ಇಂದು ಸೋಂಕಿನ ಸಂಖ್ಯೆ ಹೆಚ್ಚುತ್ತಿದೆ. ಈ ಕಾರಣದಿಂದ ವಕೀಲರು ಯಾರು ಕೋರ್ಟ್‌ಗೆ ಬರುವ ಅವಶ್ಯಕತೆ ಇಲ್ಲ ನೀವು ಎಲ್ಲಿದ್ದೀರಾ ಅಲ್ಲಿಂದಲೇ ಕಾರ್ಯನಿರ್ವಹಿಸಿ ಎಂದು ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ವರದಿಯನ್ನು ನಾವು ಪತ್ರಿಕೆಗಳಲ್ಲಿ ನೋಡುತ್ತಿದ್ದೇವೆ ಆ ಕಾರಣಕ್ಕೆ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ವಕೀಲರು ಆನ್‌ಲೈನ್ ಮೂಲಕವೇ ಕೆಲಸ ಮಾಡಲಿ. ಆನ್‌ಲೈನ್ ಮೂಲಕವೇ ನಿಮ್ಮ ವಾದಗಳನ್ನು ನಾವು ಕೇಳುತ್ತೇವೆ ಎಂದು ಹೇಳಿದ್ದಾರೆ.

ಈಗಾಗಲೇ ಸುಪ್ರೀಂ ಕೋರ್ಟ್ ಆ್ಯಪ್ ಮತ್ತು ಯೂಟ್ಯೂಬ್ ಮೂಲಕ ಸಂವಿಧಾನ ಪೀಠದ ಪ್ರಕ್ರಿಯೆಗಳನ್ನು ಲೈವ್-ಸ್ಟೀಮ್ ಮಾಡಲು ಪ್ರಾರಂಭಿಸಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News