ಮೂಡುಬಿದಿರೆ (ಏ 07) : ಹಿರಿಯ ದೈವಪಾತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಾಡಿ ಅಣ್ಣು ಶೆಟ್ಟಿ (78ವ)ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಲಾಡಿ ಹಜಂಕಾಲಬೆಟ್ಟು, ಮಾರ್ನಾಡು, ತೋಡಾರು ಸಹಿತ ಜಿಲ್ಲೆಯ ಹಲವಾರು ದೈವಸ್ಥಾನಗಳಲ್ಲಿ ದೈವಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಮೃತರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.