ಬೆಂಗಳೂರಿಗೆ ಆಗಮಿಸುತ್ತಿದ್ದ ವಿಮಾನದಲ್ಲಿ ಹುಚ್ಚಾಟ – ತುರ್ತು ನಿರ್ಗಮನ ದ್ವಾರ ತೆಗೆಯಲು ವ್ಯಕ್ತಿ ಪ್ರಯತ್ನ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕನೊಬ್ಬ ಕಂಠಪೂರ್ತಿ ಕುಡಿದು ನಶೆಯಲ್ಲಿ ಹುಚ್ಚಾಟ ಮೆರೆದಿದ್ದಾನೆ.

ವಿಮಾನ ಹಾರಾಟದ ವೇಳೆಯೇ ತುರ್ತು ನಿರ್ಗಮನ ದ್ವಾರವನ್ನು ತೆರೆಯಲು ಪ್ರಯತ್ನಿಸಿದ ವ್ಯಕ್ತಿಯ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ.

ಘಟನೆ ಗ ವಿಮಾನ ಸಂಖ್ಯೆ 6E 308 ರಲ್ಲಿ ನಡೆದಿದೆ.

ಆರೋಪಿಯನ್ನು ಪ್ರತೀಕ್ (40) ಎಂದು ಗುರುತಿಸಲಾಗಿದೆ. ಆತ ಕಂಠಪೂರ್ತಿ ಮದ್ಯಪಾನ ಮಾಡಿ ತುರ್ತು ನಿರ್ಗಮನ ದ್ವಾರವನ್ನು ತೆರೆಯಲು ಪ್ರಯತ್ನಿಸಿದ್ದಾನೆ ಎನ್ನಲಾಗಿದೆ.

ಪ್ರಯಾಣಿಕನ ನಡತೆ ಕಂಡು ತಕ್ಷಣವೇ ಎಚ್ಚೆತ್ತ ವಿಮಾನದ ಸಿಬ್ಬಂದಿ ಈ ಬಗ್ಗೆ ಕ್ಯಾಪ್ಟನ್‌ಗೆ ಮಾಹಿತಿ ನೀಡಿದ್ದಾರೆ. ಆತನನ್ನು ತಡೆದು, ವಿಮಾನ ಬೆಂಗಳೂರಿಗೆ ಬಂದಿಳಿದ ಬಳಿಕ ಸಿಐಎಸ್‌ಎಫ್ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ. ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಯಾಣಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಘಟನೆ ಬಗ್ಗೆ ಹೆಚ್ಚಿನ ತನಿಖೆಯನ್ನು ಪ್ರಾರಂಭಿಸಲಾಗಿದೆ.

You cannot copy content from Baravanige News

Scroll to Top