‘ದೇಶದ ಬಹುತೇಕ ಭಾಗಗಳಲ್ಲಿ ಮುಂದಿನ 5 ದಿನಗಳಲ್ಲಿ ತಾಪಮಾನ ಏರಿಕೆ’ – ಐಎಂಡಿ ಎಚ್ಚರಿಕೆ

ನವದೆಹಲಿ, ಏ08: ಬೇಸಿಲಿನ ಬೇಗೆಗೆ ಈಗಾಗಲೇ ಜನರು ತತ್ತರಿಸಿ ಹೋಗಿದ್ದು, ಇದರ ನಡುವೆ ಮುಂದಿನ ಐದು ದಿನಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ತಾಪಮಾನವು 2 ರಿಂದ 4 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

ಮುಂದಿನ ಎರಡು ದಿನಗಳಲ್ಲಿ ಮಧ್ಯಪ್ರದೇಶ, ಒಡಿಶಾ, ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ತಿಂಗಳ ಆರಂಭದಲ್ಲಿ ಹವಾಮಾನ ಇಲಾಖೆಯು ವಾಯುವ್ಯ ಮತ್ತು ಪರ್ಯಾಯ ದ್ವೀಪದ ಭಾಗಗಳನ್ನು ಹೊರತುಪಡಿಸಿ ದೇಶದ ಹಲವು ಭಾಗಗಳಲ್ಲಿ ಏಪ್ರಿಲ್‌ನಿಂದ ಜೂನ್‌ವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನವನ್ನು ಅನುಭವಿಸುವ ನಿರೀಕ್ಷೆಯಿದೆ ಎಂದು ಹೇಳಿತ್ತು.

You cannot copy content from Baravanige News

Scroll to Top