ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಸೌರಯುಗಾದಿ ಆಚರಣೆ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಸೌರ ಯುಗಾದಿಯ ಪ್ರಯುಕ್ತ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಉತ್ಸವ ನಡೆಯಿತು.

ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು, ಸೋದೆ ಮಠಾಧೀಶರಾದ ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದರು, ಅದಮಾರು ಕಿರಿಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಮಠಾಧೀಶರಾದ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಹಾಗೂ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.

ಚಂದ್ರಶಾಲೆಯಲ್ಲಿ,ಪರ್ಯಾಯ ಮಠದ ವತಿಯಿಂದ ಶ್ರೀಪಾದರಿಗೆ ಗಂಧಾದಿ ಉಪಚಾರಗಳೊಂದಿಗೆ ಗೌರವ ಕಾಣಿಕೆ ಸಲ್ಲಿಸಲಾಯಿತು.

ಪರ್ಯಾಯ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯ ಇವರು ಶೋಭಕೃತ್ ನಾಮ ಸಂವತ್ಸರದ ಪಂಚಾಂಗ ಶ್ರವಣ ನಡೆಸಿದರು.

You cannot copy content from Baravanige News

Scroll to Top