ಹುಬ್ಬಳ್ಳಿ, ಏ 16: ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಭಾನುವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶನಿವಾರ ತಡರಾತ್ರಿ ಘೋಷಿಸಿದ್ದಾರೆ.
ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂದು ಶಿರಸಿಗೆ ತೆರಳಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.
ಇನ್ನು ಬಿಜೆಪಿಯಲ್ಲಿ ಷಡ್ಯಂತ್ರ ನಡೆಯುತ್ತಿದ್ದು, ಅದರಲ್ಲಿ ಯಾರ ಕೈವಾಡ ಇದೆ ಎನ್ನುವುದನ್ನು ಈಗ ಹೇಳುವುದಿಲ್ಲ. ನಾನು ಸ್ಪರ್ಧೆ ಮಾಡುವುದು ನಿಶ್ಚಿತ ಎಂದರು.