ಉಡುಪಿ : ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಯಶಪಾಲ್ ಸುವರ್ಣ್ ಎಪ್ರಿಲ್ 20 ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಮಂಗಳವಾರ ಕಿದಿಯೂರು ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಡಬಲ್ ಎಂಜಿನ್ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಹಾಗೂ ಕ್ಷೇತ್ರದಲ್ಲಿ ಶಾಸಕ ರಘುಪತಿ ಭಟ್ ಅವರ ಅಭಿವೃದ್ದಿಯನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡಲಾಗುವುದು ಎಂದರು.
ಎಪ್ರಿಲ್ 20 ರಂದು ಬೃಹತ್ ಪಾದಯಾತ್ರೆ ಮೂಲಕ ನಾಮಪತ್ರ ಸಲ್ಲಿಸಲಾಗುವುದು ಎಂದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ, ಬಿಜೆಪಿಗೆ ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಮಾದರಿಯಲ್ಲ. ಉಡುಪಿ ಶಾಸಕ ರಘುಪತಿ ಭಟ್ ಹಾಗೂ ಕಾಪು ಶಾಸಕ ಲಾಲಾಜಿ ಮೆಂಡನ್ ಮಾದರಿ. ಚುನಾವಣೆಯಲ್ಲಿ ಸೋತ ಸವದಿ ಅವರನ್ನು ಎಂಎಲ್‌ಸಿ ಮಾಡಿ ಸಚಿವ ಸ್ಥಾನ, ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗಿತ್ತು. ಶೆಟ್ಟರ್ ಅವರಿಗೆ ಶಾಸಕ, ಸಚಿವ, ಸ್ಪೀಕರ್, ವಿರೋಧ ಪಕ್ಷದ ನಾಯಕ, ಮುಖ್ಯಮಂತ್ರಿ ಹುದ್ದೆ ಕೊಡಲಾಗಿತ್ತು. ಕೇವಲ ಸ್ವಾರ್ಥಕ್ಕಾಗಿ ಬಿಜೆಪಿ ತೊರೆದ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರಿಗೆ ಮತದಾರರು ಪಾಠ ಕಲಿಸಲಿದ್ದಾರೆ ಎಂದರು.
ಎಪ್ರಿಲ್ 20 ರಂದು ಉಡುಪಿ ವಿಧಾನಸಭಾ ಬಿಜೆಪಿ ಅಭ್ಯರ್ಥಿ ಯಶಪಾಲ್ ಸುವರ್ಣ ನಾಮಪತ್ರ ಸಲ್ಲಿಕೆ
