ಟಿಕೆಟ್ ನೀಡುವಂತೆ ಮೊಬೈಲ್ ಟವರ್ ಏರಿ ಕುಳಿತ ಕಾರ್ಯಕರ್ತ..!!!

ಚಿಕ್ಕಮಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನನಗೆ ಬೇಕೆಂದು ವ್ಯಕ್ತಿಯೊಬ್ಬ ಬಿಎಸ್ಎನ್ಎಲ್ ಮೊಬೈಲ್ ಟವರ್ ಏರಿ ಹಠ ಹಿಡಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ.

ಶಿವನಿ ಆರ್.ಎಸ್. ಗ್ರಾಮದ ರಂಗಪ್ಪ ಎಂಬಾತ ಅಜ್ಜಂಪುರ ತರೀಕೆರೆ ವಿಧಾನಸಭಾ ವ್ಯಾಪ್ತಿಗೆ ಒಳಪಟ್ಟಿದ್ದು, ಬಿಜೆಪಿಯಿಂದ ಈಗಾಗಲೇ ಡಿ.ಎಸ್.ಸುರೇಶ್ ಕಣಕ್ಕಿಳಿದಿದ್ದಾರೆ. ಈ ನಡುವೆ ರಂಗಪ್ಪ, ನನಗೆ ಬಿಜೆಪಿ ಟಿಕೆಟ್ ಬೇಕೇ ಬೇಕು ಅಂತ ಪಟ್ಟು ಹಿಡಿದು ಮೊಬೈಲ್ ಟವರ್ ಏರಿದ್ದಾನೆ.

ಇನ್ನು ಈ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ರಂಗಪ್ಪನನ್ನು ಮನವೊಲಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ರಂಗಪ್ಪ ಕಳೆದ 15 ವರ್ಷಗಳಿಂದ ಬಿಜೆಪಿ ಕಾರ್ಯಕರ್ತನಾಗಿದ್ದು, ಟಿಕೆಟ್ ಗಾಗಿ ಹಠ ಹಿಡಿದು ಟವರ್ ಏರಿದ್ದು ಪೊಲೀಸರು ಮನವೊಲಿಸಿ ಕೆಳಗಿಳಿಸಿದ್ದಾರೆ.

You cannot copy content from Baravanige News

Scroll to Top