ಬೆಂಗಳೂರು: ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ಅಭಿನಯಿಸಿದ್ದ ಕಿರುತೆರೆಯ ಯುವನಟ ಸಂಪತ್ ಜಯರಾಮ್ (35) ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆಲಮಂಗಲದ ಅರಿಶಿನಕುಂಟೆಯಲ್ಲಿರುವ ನಿವಾಸದಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತ ಸಂಪತ್ ಜಯರಾಮ್ ಅಗ್ನಿಸಾಕ್ಷಿ ಧಾರಾವಾಹಿ ಸೇರಿದಂತೆ ಕೆಲ ಸಿನಿಮಾಗಳಲ್ಲಿ ನಟಿಸಿದ್ದರು. ಒಂದು ವರ್ಷದ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಇತ್ತೀಚೆಗೆ ಅವರಿಗೆ ಯಾವುದೇ ನಟನೆಯ ಅವಕಾಶಗಳು ಬಂದಿರಲಿಲ್ಲ. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇನ್ನು ಈ ಘಟನೆಯು ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.