ದೂರು ಬಾರದೆ ಇದ್ದರೂ ಪ್ರಕರಣ ದಾಖಲಿಸಿ: ದ್ವೇಷ ಭಾಷಣ ವಿರುದ್ಧ ರಾಜ್ಯಗಳಿಗೆ ಸುಪ್ರೀಂ ಎಚ್ಚರಿಕೆ

ನವದೆಹಲಿ: ಸುಪ್ರೀಂ ಕೋರ್ಟ್ ಶುಕ್ರವಾರ ತನ್ನ ಅಕ್ಟೋಬರ್ 2022 ರ ಆದೇಶದ (ದ್ವೇಷ ಭಾಷಣ ಪ್ರಕರಣಗಳ ವಿರುದ್ಧ ಸ್ವಯಂಪ್ರೇರಿತ ಕ್ರಮ ತೆಗೆದುಕೊಳ್ಳಲು ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಪೊಲೀಸರಿಗೆ ನಿರ್ದೇಶನ) ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಿಸ್ತರಿಸಿದೆ.

ಈಗ, ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಯಾವುದೇ ಔಪಚಾರಿಕ ದೂರಿಗೆ ಕಾಯದೆ ದ್ವೇಷ ಭಾಷಣಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಸ್ವಯಂಪ್ರೇರಿತ ಕ್ರಮ ತೆಗೆದುಕೊಳ್ಳಲು ಆದೇಶಿಸಲಾಗಿದೆ.

ಇನ್ನು ಅಕ್ಟೋಬರ್ 21, 2022 ರಂದು ಹೊರಡಿಸಿದ ಆರಂಭಿಕ ಆದೇಶವು ದೆಹಲಿ, ಉತ್ತರಾಖಂಡ, ಉತ್ತರ ಪ್ರದೇಶದ ಎನ್ಸಿಟಿ ಸರ್ಕಾರಗಳಿಗೆ ಮಾತ್ರ ಅನ್ವಯಿಸುತ್ತದೆ.

Scroll to Top