ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಚುನಾವಣಾ ಆಯೋಗದ ನಿರ್ದೇಶನದಂತೆ ಇಂದಿನಿಂದ ಮನೆಯಿಂದಲೇ ಮತದಾನ ಆರಂಭವಾಗಲಿದೆ. ಏಪ್ರಿಲ್ 29 ರಿಂದ ಮೇ 6 ರವರೆಗೆ ಬ್ಯಾಲೆಟ್ ಮತದಾನಕ್ಕೆ ಅವಕಾಶವಿದೆ.
80 ವರ್ಷ ಮೇಲ್ಪಟ್ಟ ವೃದ್ದರು, ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಬ್ಯಾಲೆಟ್ ಪೇಪರ್ ವೋಟಿಂಗ್ ಆರಂಭ . ಮತದಾನ ಮಾಡುವ ವೇಳೆ ಅಧಿಕಾರಿಗಳು ವಿಡಿಯೋ ರೆಕಾರ್ಡಿಂಗ್ ಮಾಡುತ್ತಾರೆ.
ಮನೆಯಲ್ಲೇ ಮತದಾನ ಮಾಡುವ ಸಂದರ್ಭದಲ್ಲಿ ವಿಡಿಯೋ ರೇಕಾರ್ಡಿಂಗ್ ಮಾಡಿಕೊಳ್ಳಲಾಗುತ್ತದೆ. ಮತದಾನದ ನಂತರ ಸ್ಟ್ರಾಂಗ್ ರೂಂಗೆ ಮತ ಪೆಟ್ಟಿಗೆಯನ್ನು ರವಾನಿಸಲಾಗುತ್ತದೆ. ಚುನಾವಣಾ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಹಾಗೂ ಪೊಲೀಸರಿಗೆ ಬ್ಯಾಲೆಟ್ ಮತದಾನದ ವ್ಯವಸ್ಥೆ ಮಾಡಲಾಗಿದ್ದು, ಇವರು ಕೂಡ ನಾಳೆಯಿಂದ ಬ್ಯಾಲೆಟ್ ಪೇಪರ್ ಮೂಲಕ ಮತದಾನ ಮಾಡಬಹುದು. ಈ ಎಲ್ಲ ಮತಗಳನ್ನೂ ಮೇ 13 ರಂದು ಮತ ಎಣಿಕೆ ದಿನ ಓಪನ್ ಮಾಡಲಾಗುವುದು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.