ಬೈಂದೂರು, ಏ 30: ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಸಂದೀಪನ್ ಶಾಲೆಯ ಹಿಂಭಾಗದಲ್ಲಿ ಚಲಿಸುತ್ತಿದ್ದ ರೈಲು ಢಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಮೃತರನ್ನು ಪಾರ್ವತಿ ಎಂಬವರ ಮಗ ಕರುಣಾಕರ ಪೂಜಾರಿ (33) ಎಂದು ಗುರುತಿಸಲಾಗಿದೆ.
ಅವಿವಾಹಿತರಾಗಿರುವ ಕರುಣಾಕರ ಪೂಜಾರಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಎ.26ರಂದು ಸಂಜೆ ಮನೆಯಲ್ಲಿ ಧರ್ಮಸ್ಥಳಕ್ಕೆ ಹೋಗುವುದಾಗಿ ತಿಳಿಸಿ ಹೋದವರು, ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುವಾಗ ರೈಲು ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.